ಜಿಲ್ಲೆ

ಸಚಿವ ಎಚ್.ಕೆ.ಪಾಟೀಲ ಅವರಿಂದ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ಪರಿಶೀಲನೆ

Gadag - Shivanand Hiremath

ಗದಗ: ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚೆನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಗುರುವಾರ ಸಾಯಂಕಾಲ ಪಾಪನಾಶಿ ಹತ್ತಿರದ ನಿಯೋಜಿತ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದರು.

ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಬೃಹತ ಕೆರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ. ಕೆರೆ ನಿರ್ಮಾಣ ಮಾಡಿ ತುಂಗಭದ್ರ ನದಿಯ ನೀರನ್ನು ಕೆರೆಗೆ ತುಂಬಿಸಿ ಅದರಿಂದ ಅವಳಿ ನಗರಕ್ಕೆ ನೀರು ನೀಡುವ ಯೋಜನೆ ಇದಾಗಿದೆ. ಇದನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಗಂಗಪ್ಪ ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಬಂಡಿವಡ್ಡರ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ದು ಪಾಟೀಲ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ಫಾರೂಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.