ಹಾಕಿ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದುಕೊಂಡ ಕುಶಾಲನಗರದ ಅನುಗ್ರಹ ಪದವಿ ಪೂರ್ವ ಕಾಲೇಜು ತಂಡ. ಅನುಗ್ರಹ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಆರ್.ಅಭಿಷೇಕ್ ಇದ್ದರು. 
ಜಿಲ್ಲೆ

ಹಾಕಿ ಕ್ರೀಡಾಕೂಟ, ಅನುಗ್ರಹ ಪ.ಪೂ. ಕಾಲೇಜು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಶಾಲನಗರ: ಜಿಲ್ಲಾ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಇಲ್ಲಿನ ಅನುಗ್ರಹ ಪದವಿ ಪೂರ್ವ ಕಾಲೇಜು ಅರ್ಹತೆ ಪಡೆದಿದೆ.

ಕೂಡಿಗೆಯ ಕ್ರೀಡಾ ಪ್ರೌಢಶಾಲೆ ಮೈದಾನದಲ್ಲಿ ಗುರುವಾರ ನಡೆದ ಕುಶಾಲನಗರ ತಾಲೂಕು ಮಟ್ಟದ ಬಾಲಕರ ಹಾಕಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಅನುಗ್ರಹ ಪದವಿ ಪೂರ್ವ ಕಾಲೇಜು ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. 3-0 ಅಂತರದಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜು ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆಯಿತು.

ಅನುಗ್ರಹ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಅಭಿಷೇಕ್ ಕೆ. ಆರ್., ಕ್ರೀಡಾ ಶಾಲೆಯ ಹಾಕಿ ತರಬೇತುದಾರ ವೆಂಕಟೇಶ್, ಪ್ರಾಂಶುಪಾ ಪ್ರೊ. ಲಿಂಗಮೂರ್ತಿ ಈ ಸಂದರ್ಭ ಇದ್ದು ತಂಡಕ್ಕೆ ಪ್ರೋತ್ಸಾಹ ನೀಡಿದರು.