ಹೊಳಲ್ಕೆರೆ: ವಿದ್ಯೆ ಹಾಗೂ ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ, ಲ್ಯಾಪ್‌ಟಾಪ್ ಉಚಿತ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮನುಷ್ಯನಿಗೆ ವಿದ್ಯೆಯಷ್ಟೇ ಆರೋಗ್ಯವೂ ಮುಖ್ಯ. ಉತ್ತಮ ಆರೋಗ್ಯಕ್ಕಾಗಿ ಯೋಗ, ವ್ಯಾಯಾಮ, ಕ್ರೀಡೆಗಳಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಪರಸ್ಪರರಲ್ಲಿ ಸಹೋದರತ್ವ ಭಾವ ಮೂಡುತ್ತದೆ ಎಂದು ತಿಳಿಸಿದರು.
ಪಂದ್ಯಾವಳಿಯಲ್ಲಿ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಪ್ರಥಮ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ದಾವಣಗೆರೆ ವಿವಿ ಕುಲಪತಿ ಡಾ.ಎಸ್.ವಿ.ಹಲಸೆ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಜಕುಮಾರ್, ತಾಪಂ ಅಧ್ಯಕ್ಷೆ ಸುಜಾತಾ, ಪ್ರಾಂಶುಪಾಲ ಪ್ರೊ.ಎಸ್.ಸುರೇಶ್ ಉಪಸ್ಥಿತರಿದ್ದರು.