ಹೊಳೆನರಸೀಪುರ: ಕಾಲೇಜು ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸುವುದರಿಂದ ಮುಂದೆ ತುರ್ತು ಸಂದರ್ಭಗಳಲ್ಲಿ ಮುಕ್ತವಾಗಿ ರಕ್ತದಾನ ಮಾಡಲು ಸಹಕಾರಿಯಾಗಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಟಿ.ಎಸ್.ಲಕ್ಷ್ಮೀಕಾಂತ್ ತಿಳಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಮತ್ತು ರೆಡ್‌ಕ್ರಾಸ್ ಶಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಕ್ತದಾನ ಉಚಿತ ಶಿಬಿರ ಮತ್ತು ರಕ್ತ ಗುಂಪು ಪರೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ಪ್ರಜೆಯೂ ರಕ್ತದ ಗುಂಪಿನ ಬಗ್ಗೆ ತಿಳಿದುಕೊಳ್ಳಬೇಕಾದ್ದು ಅತ್ಯವಶ್ಯಕ ಎಂದರು.
ಶಿಬಿರದಲ್ಲಿ 85 ವಿದ್ಯಾರ್ಥಿಗಳು ರಕ್ತದಾನ ಮಾಡಿದರು ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದ ಗುಂಪಿನ ಮಾಹಿತಿ ಪಡೆದರು.
ಪ್ರಾಂಶುಪಾಲ ಕೆ.ಬಾಷಾ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಛೇರ‌್ಮನ್ ಎಚ್.ಪಿ.ಮೋಹನ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ, ನಿವೃತ್ತ ಪ್ರಾಂಶುಪಾಲ ಡಾ.ಕೆ.ಸಿ.ಮರಿಯಪ್ಪ, ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಎನ್.ವಿ.ಶ್ರೀನಿವಾಸ್, ದೈಹಿಕ ಶಿಕ್ಷಣ ನಿರ್ದೇಶಕ ಕಿರಣ್ ರಾವತ್, ಎಂ.ಎನ್.ಜೈಪ್ರಕಾಶ್, ರೆಹಮಾನ್, ಪ್ರಯೋಗಾಲಯ ತಂತ್ರಜ್ಞ ಪ್ರಕಾಶ್ ಮತ್ತಿತರರಿದ್ದರು.