ಜಿಲ್ಲೆ

ನಿರ್ಬಂಧಿತ ಪ್ರದೇಶಗಳಿಗೆ ತಹಸೀಲ್ದಾರ್ ಭೇಟಿ

ಹೊಳೆನರಸೀಪುರ: ಪಟ್ಟಣದ ನಿರ್ಬಂಧಿತ ಪ್ರದೇಶಗಳಿಗೆ ಸೋಮವಾರ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ನಂತರ ಮಾತನಾಡಿದ ಅವರು, ಜಿಲ್ಲಾಡಳಿತದ ನಿರ್ದೇಶನದಂತೆ ನಿರ್ಬಂಧಿತ ಪ್ರದೇಶಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಡಾವಣೆಯ ನಿವಾಸಿಗಳ ಆರೋಗ್ಯ ರಕ್ಷಣೆಗೋಸ್ಕರ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಯಾವುದೇ ರೀತಿಯ ಸಮಸ್ಯೆ ಬಾರದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರಕ್ಷಣೆ, ಅಗತ್ಯ ವಸ್ತುಗಳ ಸರಬರಾಜು ಮತ್ತು ಆರೋಗ್ಯ ತಪಾಸಣೆ ನಡೆಯುತ್ತಿದೆ. ಹೆಚ್ಚಿನ ಕಾಳಜಿಯೊಂದಿಗೆ ವೈದ್ಯರು, ಕಂದಾಯ ಇಲಾಖೆ, ಪೊಲೀಸರು ಹಾಗೂ ಪುರಸಭೆ ಸಿಬ್ಬಂದಿ ಸಹಕರಿಸುತ್ತಿದ್ದಾರೆ ಎಂದರು.


ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರ ಗಡಿಯ ನಿಪ್ಪಾಣಿ ತಾಲೂಕಿನ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿ ಆಗಮಿಸಿದ್ದ ನಗರ ಠಾಣೆಯ ಪಿಎಸ್ಸೈ ಹಾಗೂ ಮೂವರು ಪೊಲೀಸರಿಗೆ ಮೇ 27ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಜಿಲ್ಲಾಡಳಿತದ ಆದೇಶದಂತೆ ಅವರು ವಾಸವಿದ್ದ ಪಿಡಬ್ಲುೃಡಿ ಹಾಗೂ ಪೊಲೀಸ್ ಕ್ವಾರ್ಟಸ್, ಆಯತ್ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ರಸ್ತೆಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ಆ ಪ್ರದೇಶಗಳ ಎಲ್ಲ ನಿವಾಸಿಗಳನ್ನು ಹೋಮ್ ಕ್ವಾರಂಟೈನ್ ಮಾಡಿ, ಅಗತ್ಯ ವಸ್ತುಗಳ ಸರಬರಾಜಿಗೆ ಸಿಬ್ಬಂದಿ ನೇಮಿಸಲಾಗಿತ್ತು.