ಜಿಲ್ಲೆ

ಎಲ್ಲ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ 28ರ ತನಕ ರಜೆ ಘೋಷಿಸಿದ ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ್ದು, ಮುಂದಿನ ಒಂದು ವಾರದ ಅವಧಿಗೆ ಕರ್ನಾಟಕ ಬಂದ್​ ಮಾಡುವಂತೆ ಸೂಚಿಸಿದೆ.

ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೆ ಮಾರ್ಚ್ 14ರಿಂದ 28ರ ತನಕ ರಜೆ ಘೋಷಿಸಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ.

ಆದಾಗ್ಯೂ, ಈ ಕಾಲೇಜುಗಳಲ್ಲಿ ಕಚೇರಿ ಕೆಲಸ ಕಾರ್ಯಗಳು ಎಂದಿನಂತೆಯೇ ಮುಂದುವರಿಯಲಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.