ಬೇಲೂರು: ಕನ್ನಡ ನಾಡ ಹಬ್ಬವನ್ನು ಒಂದು ದಿನಕ್ಕೆ ಸೀಮಿತಗೊಳಸದೆ, ನಿತ್ಯವೂ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾದಾಗ ಮಾತ್ರ ನಾಡ ಹಬ್ಬಕ್ಕೆ ಅರ್ಥ ಬರುತ್ತದೆ ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಹೇಳಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಜ್ಯೂನಿಯರ್ ಕಾಲೇಜು ಮುಂಭಾಗದ ಜಯ ಕರ್ನಾಟಕ ಸಂಘಟನೆ ಆಟೋ ಘಟಕದಿಂದ ಶನಿವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕಲೆ, ಸಾಹಿತ್ಯ, ನೃತ್ಯ, ಸಂಗೀತಕ್ಕೆ ತವರೂರಾಗಿರುವ ನಮ್ಮ ಕನ್ನಡ ನಾಡು, ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾ ಶಾಸನ ನಮ್ಮದೇ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಪ್ರಜ್ವಲಿಸಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ. ಇಂತಹ ಪವಿತ್ರ ಭಾಷೆಯನ್ನು ಕನ್ನಡಿಗರಾದ ನಾವು ಪ್ರತಿ ಮನೆಯಲ್ಲೂ ಮಕ್ಕಳಿಗೆ ತಿಳಿಸಬೇಕು. ಇಂದು ಆಂಗ್ಲ ಭಾಷೆಯ ವ್ಯಾಮೋಹಕ್ಕೊಳಗಾಗಿ ರಾಜ್ಯೋತ್ಸವದಂದು ಮಾತ್ರ ಕನ್ನಡ ಉಳಿಸಿ ಎನ್ನುವುದನ್ನು ಬಿಟ್ಟು, ನಿತ್ಯ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.
ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿದರು. ಜಯ ಕರ್ನಾಟಕ ಸಂಘಟನೆ ತಾಲೂಕು ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಕೋಟೆ ಕುಮಾರ್, ಹೋಬಳಿ ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷ ವಸಂತಕುಮಾರ್, ಆಟೋ ಘಟಕದ ಅಧ್ಯಕ್ಷರಾದ ಲಕ್ಷ್ಮಣ್, ಕುಮಾರ್, ಕಾರ್ಯದರ್ಶಿ ಚಂದ್ರಪ್ಪ, ಮುಖಂಡರಾದ ಯೋಗೇಶ್, ಸತೀಶ್, ಜಯರಾಮ್, ಅಶೋಕ್, ಹೂವಣ್ಣ, ಕುಮಾರ್, ಕಿರಣ್, ಪ್ರದೀಪ್, ನಾಗರಾಜು, ಲೋಹಿತ್ ಪದಾಧಿಕಾರಿಗಳಿದ್ದರು.