ಜಿಲ್ಲೆ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‌ನಲ್ಲಿರುವ ಗೃಹರಕ್ಷಕ ದಳದ ಕಚೇರಿಯಲ್ಲಿ ಮಂಗಳವಾರ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯಲ್ಲಿ ನಡೆಯಿತು.


ಆ.24ರಂದು ನಡೆಯುವ ಮಾನಸಿಕ ಆರೋಗ್ಯ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಕುರಿತು, ಆಯುಕ್ತರ ಕಚೇರಿಗೆ ಹೆಚ್ಚುವರಿ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ ತಾರೀಖಿನೊಳಗೆ ನೀಡುವ ಕುರಿತು, ಮುಂಬರುವ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಲಾಯಿತು. ಗೃಹರಕ್ಷಕರ ಕ್ಷೇಮಾಭಿವೃದ್ದಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರ ಬಗ್ಗೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಚರ್ಚಿಸಲಾಯಿತು. ಮೂರು ವರ್ಷಗಳನ್ನು ಮೀರಿದ ಗೃಹರಕ್ಷಕರು ನವೀಕರಣ ಮಾಡಿಸಲು ಸೂಚಿಸಲಾಯಿತು ಹಾಗೂ ಗೃಹರಕ್ಷಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು.


ಉಪಸಮಾದೇಷ್ಟ ರಮೇಶ್ ಸ್ವಾಗತಿಸಿದರು. ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ, ಈ ಸಂದರ್ಭದಲ್ಲಿ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್‌ಶೇರ್, ಬಂಟ್ವಾಳ ಘಟಕಾಧಿಕಾರಿ ಐತಪ್ಪ, ಪುತ್ತೂರು ಘಟಕಾಧಿಕಾರಿ ಅಭಿಮನ್ಯು ರೈ, ಕಡಬ ಘಟಕಾಧಿಕಾರಿ ತೀರ್ಥೇಶ್, ಉಳ್ಳಾಲ ಪ್ರಭಾರ ಘಟಕಾಧಿಕಾರಿಗಳಾದ ಎಂ.ಭಾಸ್ಕರ್, ಮೂಲ್ಕಿ ಲೋಕೇಶ್, ಉಪ್ಪಿನಂಗಡಿ ದಿನೇಶ್, ರಮೇಶ್ ಸುರತ್ಕಲ್ ಘಟಕ, ಹರಿಶ್ಚಂದ್ರ ಸುಬ್ರಹ್ಮಣ್ಯ ಘಟಕ, ಜಯಾನಂದ ಬೆಳ್ತಂಗಡಿ ಘಟಕ, ಸೋಮನಾಥ, ಸುಳ್ಯ ಘಟಕ, ಶಿವಪ್ಪ ನಾಯ್ಕ ಪಣಂಬೂರು ಘಟಕ, ಉಮೇಶ್ ಬಂಗೇರಾ ವಿಟ್ಲ ಘಟಕ ಉಪಸ್ಥಿತರಿದ್ದರು.