ಜಿಲ್ಲೆ

ಮನೆ ಮನಗಳು ಧರ್ಮ ಕ್ಷೇತ್ರವಾಗಬೇಕು

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಬೈಂದೂರು

ಸಂಸ್ಕಾರಯುಕ್ತ ಜೀವನ ಮೌಲ್ಯಗಳು ಉಳಿಯಬೇಕಾದರೆ ಮನೆ ಮನಗಳು ಧರ್ಮಕ್ಷೇತ್ರವಾಗಬೇಕು. ಸವಾಜದಲ್ಲಿ ಉತ್ತಮ ಸಂಸ್ಕೃತಿ ಸಂಸ್ಕಾರಗಳನ್ನು ನಿರ್ವಾಣ ವಾಡಬೇಕು ಎಂದು ನಿಪ್ಪಾಣಿ ಮಹಾಕಾಳಿ ಮಹಾಸಂಸ್ಥಾನ ಸದ್ಧರ್ಮ ಓಂಶಕ್ತಿ ಪೀಠಾಧೀಪತಿ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಹೇಳಿದರು.

ಬಿಜೂರು ಸುಮನಾವತಿ ನದಿತೀರದಲ್ಲಿ ಸುವಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ವಾಣವಾಗುತ್ತಿರುವ ಕೋಟಿ-ಚೆನ್ನಯ ಪಂಜುರ್ಲಿ ನೂತನ ಗರಡಿ ಕಾಮಗಾರಿಗೆ ಶುಕ್ರವಾರ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.

ಕೋಟಿಚೆನ್ನಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ, ಮಾಲತಿ ಪೂಜಾರಿ ದಂಪತಿ ಗುರುಗಳ ಪಾದಪೂಜೆ ನೆರವೇರಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಗುರುರಾಜ ಗಂಟಿಹೊಳೆ, ಕೋಟಿ ಚೆನ್ನಯ ಪಂಜುರ್ಲಿ ಗರಡಿ ಪಾತ್ರಿ ರಾಮ ಎಂ.ಪೂಜಾರಿ, ಆಡಳಿತ ಮಂಡಳಿ ಅಧ್ಯಕ್ಷ ಗೋವಿಂದ ಎಂ.ಪೂಜಾರಿ, ಗರಡಿ ಬಲ್ಲಾಳ ಸೀತಾರಾಮ ಶೆಟ್ಟಿ, ಗೋವಿಂದ ಶೇರಿಗಾರ್, ಉದ್ಯಮಿಗಳಾದ ಲಕ್ಷ್ಮೀಕಾಂತ್ ಬೆಸ್ಕೂರ್, ಶೇಖರ ಪೂಜಾರಿ, ವೆಂಕಟ್ರಮಣ ಶೇರುಗಾರ್, ನರಸಿಂಹ ಪೂಜಾರಿ, ಭಾಸ್ಕರ ಪೂಜಾರಿ, ಕೃಷ್ಣ ಪೂಜಾರಿ ಪೇರಂಜಾಲು, ಸೂರ್ಯ ಎಸ್.ಪೂಜಾರಿ ಕಟ್ಟೆಮನೆ, ಪಂಜು ಪೂಜಾರಿ ಆಸ್ರಣ್ಣ, ಜಟ್ನಾಡಿಮಕ್ಕಿ ಶ್ರೀನಿವಾಸ ಪೂಜಾರಿ ಆಸ್ರಣ್ಣ, ರಾಮ ಎ. ಪೂಜಾರಿ, ಚವ್ಮಾನ್ಹಿತ್ಲು ಉಪಸ್ಥಿತರಿದ್ದರು. ಬಿಜೂರು ಅರೆಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜೇಂದ್ರ ಬಿಜೂರು ಸ್ವಾಗತಿಸಿದರು. ಉಪಾಧ್ಯಕ್ಷ ಸುರೇಶ ಬಿಜೂರು ವಂದಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.

ಕೋಟಿಚೆನ್ನಯರು ಸೂರ್ಯ ಹಾಗೂ ನಾಗದೇವರ ಅಂಶವಾಗಿದ್ದು, ಪ್ರಥಮವಾಗಿ ಸವಾನತೆಯ ಯುದ್ಧ ಸಾರಿ ಯಶಸ್ವಿಯಾದವರು. ಸುವಾರು 900 ವರ್ಷ ಇತಿಹಾಸವಿರುವ ಹಾಗೂ ಅವಿಭಜಿತ ದ.ಕ. ಜಿಲ್ಲೆಯ 66ನೇ ಹಾಗೂ ಉತ್ತರ ತುದಿಯ ಕೊನೆಯ ಗರಡಿ ಎಂಬ ಹೆಗ್ಗಳಿಕೆಯಿದೆ. ಪ್ರಸ್ತುತ ನೂತನ ಗರಡಿಯ ಕಟ್ಟಡ ರಚನೆ ಮತ್ತು ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಶೀಘ್ರ ಪೂರ್ಣಗೊಂಡು ಊರಿಗೆ ಸುಭಿಕ್ಷೆಯಾಗಲಿ -ಅವದೂತ ವಿನಯ್ ಗುರೂಜಿ, ಗೌರಿಗದ್ದೆ https://www.vijayavani.net/let-students-develop-civilized-behavior https://www.vijayavani.net/attaining-good-morals-through-studying-the-bhagavad-gita