ಕೂಡ್ಲಿಗಿ: ತಾಲೂಕಿನ ಕಾನಹೊಸಹಳ್ಳಿಯಲ್ಲಿ ಏ.19ರಂದು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ತಹಸೀಲ್ದಾರ್ ವಿ.ಕೆ.ನೇತ್ರಾವತಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾನಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು.
ಅಧಿಕಾರಿಗಳು ಇಲಾಖೆ ವ್ಯಾಪ್ತಿಯ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು ಇಲ್ಲವೇ ಮೇಲಧಿಕಾರಿಗಳ ಗಮನಕ್ಕೆ ತಂದು ನಿಗದಿತ ಸಮಯದಲ್ಲಿ ಅದನ್ನು ಬಗೆಹರಿಸಬೇಕು. ಈ ಹಿಂದೆ ಅಹವಾಲು ನೀಡಿದ ಅರ್ಜಿಗಳು ಬಾಕಿ ಇದ್ದು, ಇತ್ಯರ್ಥಗೊಳಿಸಬೇಕು. ಜನಸ್ಪಂದನ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಬಗೆಹರಿಸಲು ಇಲಾಖೆವಾರು ಕೌಂಟರ್ ಮಾಡಿ, ಅರ್ಜಿ ಪಡೆದು, ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ತಹಸೀಲ್ದಾರ್ ಸೂಚಸಿದರು.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮ ನೆಪಕ್ಕೆ ನಡೆಯದೆ ಎಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕು ಎಂದರು.
ಬಿಇಒ ಪದ್ಮನಾಭ ಕರಣಂ, ಲೋಕೋಪಯೋಗಿ ಇಲಾಖೆ ಎಇಇ ಕೆ.ನಾಗನಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಜಿ.ಆಂಜನೇಯ, ಎಸ್ಟಿ ಅಧಿಕಾರಿ ಮೆಹಬೂಬ್ ಬಾಷಾ ಅರಸಿಕೆರೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶಾಯಿಕಾ ಅಹಮ್ಮದಿ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್, ತಾಪಂ ವ್ಯವಸ್ಥಾಪಕ ಅಶ್ವಥ್ ಕುಮಾರ್ ಇತರರಿದ್ದರು.