ಜಿಲ್ಲೆ

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

Haveri - Kariyappa Aralikatti

ಹಾನಗಲ್ಲ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಶಿಗೀಹಳ್ಳಿ ಪ್ಲಾಟ್ ಬಳಿ ಸೋಮವಾರ ಸಂಭವಿಸಿದೆ.
ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಮಾಂತೇಶ ಮಲ್ಲಪ್ಪ ಸಂಗೂರ (30) ಮೃತ ವ್ಯಕ್ತಿ.
ಈತ ನಾಲ್ಕರ್ ಕ್ರಾಸ್‌ನಿಂದ ದೇವಗಿರಿಗೆ ಬರುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಆತನನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.