ಜಿಲ್ಲೆ

ಹೊನ್ನಾಳಿ ತಾಲೂಕಿನಲ್ಲಿ ಟ್ರ್ಯಾಕ್ಟರ್, ಬೈಕ್ ನಡುವೆ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ದುರ್ಮರಣ

Chitradurga

ಹೊನ್ನಾಳಿ: ತಾಲೂಕಿನ ಹರಳಹಳ್ಳಿ ಬಳಿ ಸೋಮವಾರ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ದಿಡಗೂರಿನ ಹನುಮಂತ (21), ಹಾಲೇಶ್ (19) ಮೃತ ದುರ್ದೈವಿಗಳು.

ಮಾನವೀಯತೆ ಮೆರೆದ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಪುತ್ರ

ಗೋವಿನಕೋವಿ ಕಡೆಯಿಂದ ಟ್ರ್ಯಾಕ್ಟರ್, ಶಿವಮೊಗ್ಗದ ಮಾರ್ಗದಿಂದ ಬರುತ್ತಿದ್ದ ಬೈಕ್ ಮಧ್ಯೆ ಡಿಕ್ಕಿಯಾಗಿದೆ. ಇದೇ ಮಾರ್ಗದಲ್ಲಿ ಆಗಮಿಸುತ್ತಿದ್ದ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಪುತ್ರ ಸುರೇಂದ್ರ ಗೌಡ ಗಾಯಾಳು ಸಂದೀಪನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.