ಜಿಲ್ಲೆ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ

Davangere - Desk - Basavaraja P

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹ I ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊನ್ನಾಳಿ: ಹೊನ್ನಾಳಿ- ನ್ಯಾಮತಿ ತಾಲೂಕಾದ್ಯಂತ ಗಾಂಜಾ ಹಾಗೂ ಇಸ್ಪೀಟ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಯುವಕರು ಹಾಳಾಗುತ್ತಿದೆ. ಇದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಪಟ್ಟಣದ ಮಹಾಲಕ್ಷಿ ್ಮ ದೇವಸ್ಥಾನದ ಬಳಿ ಬುಧವಾರ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಡಿದರು.

ಎರಡು ತಾಲೂಕಿಗೆ ಹೊರಗಿನಿಂದ ಗಾಂಜಾ ತಂದು ಮಾರಾಟ ಮಾಡಲಾಗುತ್ತಿದೆ. ಯುವಕರು ಗಾಂಜಾ ಸೇವನೆಯಿಂದ ಬದುಕನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಜೂಜಾಟದಲ್ಲಿ ತೊಡಗಿಸಿಕೊಂಡು ಆರ್ಥಿಕ ನಷ್ಟ ಅನುಭವಿಸುವುದಲ್ಲದೆ, ಕುಟುಂಬದ ನೆಮ್ಮದಿ ಕೂಡ ಹಾಳಾಗುತ್ತಿದೆ. ಕೂಡಲೆ ಪೊಲೀಸ್ ಇಲಾಖೆಯು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಎರಡು ತಾಲೂಕಿನಲ್ಲಿ ಗಾಂಜಾ ಹಾಗೂ ಇಸ್ಪೀಟ್ ಜೂಜಾಟದ ಬಗ್ಗೆ ತಿಳಿಸಿ. ಅದನ್ನು ಮಟ್ಟ ಹಾಕುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತನಾಡಿದ್ದೇನೆ. ಅವರು ಸಹ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ತುಂಗಾ ನಾಲೆಯ ವ್ಯಾಪ್ತಿಯಲ್ಲಿ ರೈತರು ಭತ್ತ ನಾಟಿ ಮಾಡಿ ಗೊಬ್ಬರ ಹಾಕಿದ್ದಾರೆ. ಆದರೆ, ಈ ಕ್ಷಣಕ್ಕೆ ನೀರು ತುರ್ತು ಅವಶ್ಯಕತೆ ಇದೆ. ತಕ್ಷಣ ನೀರು ಬಿಡಿಸುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ಬಿತ್ತನೆ ಮಾಡಿರುವ ಭತ್ತ ಹಾಳಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ತುಂಗಾ ನಾಲೆಯ ಮೂಲಕ ನೀರು ಬಿಡಬೇಕು ಎಂದು ಅಧಿಕಾರಿಗಳಿಗೆ ಆಗ್ರಹಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ. 2ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ಈಗ ಎಲ್ಲ ಗ್ರಾಮದಲ್ಲೂ ಶೇ. 95 ಮುಗಿಸಿದ್ದೇವೆ ಎಂದು ಹೇಳಿದರು.

ಪುರಸಭಾ ಮಾಜಿ ಅಧ್ಯಕ್ಷರಾದ ರಂಗನಾಥ್, ಕೆ.ವಿ.ಶ್ರೀಧರ್, ಮುಖಂಡರಾದ ನವೀನ್ ಇಂಚರ, ಕುಮಾರಸ್ವಾಮಿ, ಪೂನಾ ರಾಜು, ರವಿ, ಸಂತೋಷ್ ಇತರರಿದ್ದರು.