ಹುಬ್ಬಳ್ಳಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ. 28 ರಂದು ಸಂಜೆ 5 ಗಂಟೆಗೆ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷ ಬಸವರಾಜ ಯಕಲಾಸಪುರ, ಡಂಬಳ ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸುವರು ಎಂದು ಹೇಳಿದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿಆರ್ಎಲ್ ಸಂಸ್ಥೆ ಚೇರ್ಮನ್ ಡಾ. ವಿಜಯ ಸಂಕೇಶ್ವರ, ವಿಶ್ವಸ್ಥ ಮಂಡಳಿಯ ಸದಸ್ಯ ಮಲ್ಲಿಕಾರ್ಜುನ ಸಾಹುಕಾರ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಶೈಕ್ಷಣಿಕ ನಾವಿನ್ಯತಾ ಪುರಸ್ಕಾರ ಪಡೆದ ಸುಧಾ ಹಾದಿಮನಿ, ಗೊ್ಲೕಬಲ್ ವ್ಯಾಲ್ಯೂಯೇಶನ ಪ್ರಶಸ್ತಿ ಪುರಸ್ಕೃತ ಗುರುಪ್ರಸಾದ ಅಂಗಡಿ, ಕೆಎಂಸಿಆರ್ಐನ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ, ಮುಂಬೈ ಐಜಿಟಿಯ ಶಿದ್ದಲಿಂಗಪ್ಪ ಹುಬ್ಬಳ್ಳಿ, ರಾಜ್ಯ ಮಹಿಳಾ ಟಿ 20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಲಕ್ಷೀ ಬಾಗೇವಾಡಿ, ಚನ್ನವೀರ ಮುಂಗರವಾಡಿ ಹಾಗೂ ಗುರುಪಾದೇಶ ಹುಬ್ಬಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಸಂಘದ ಅಧ್ಯಕ್ಷ ಆನಂದ ಉಪ್ಪಿನ, ಚನ್ನಬಸಪ್ಪ ಧಾರವಾಡಶೆಟ್ಟರ, ವಿರುಪಾಕ್ಷ ಬಿಸರಳ್ಳಿ, ಶಿವಾನಂದ ಉದಪುಡಿ, ಕಿರಣ ಹುಬ್ಬಳ್ಳಿ, ರಾಜ ಶೆಟ್ಟರ ಉಪಸ್ಥಿತರಿದ್ದರು.