ಚಿಕ್ಕಮಗಳೂರಿನ ಲಯನ್ಸ್ ಭವನದಲ್ಲಿ ನಡೆದ ಅಂತರಾಷ್ಟಿçÃಯ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಸೇವಾ ನೌಕರರನ್ನು ಸನ್ಮಾನಿಸಲಾಯಿತು. ಕೆ.ಪುಷ್ಪರಾಜ್, ಗೋಪಿಕೃಷ್ಣ, ವೆಂಕಟೇಶ್, ಎಂ.ಎA.ಗಿರೀಶ್, ಎಂ.ಆರ್.ನಾಗರಾಜ್ ಮತ್ತಿತರರಿದ್ದರು. 
ಜಿಲ್ಲೆ

ಪೌರಕಾರ್ಮಿಕರಿಗೆ ಸನ್ಮಾನ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಪ್ರತಿದಿನ ಮುಂಜಾನೆಯೇ ನಗರದ ನೈರ್ಮಲ್ಯ ಕಾಪಾಡುವ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ. ನಗರದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿದಿನ ಕೆಲಸ ಮಾಡುವ ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಪುಷ್ಪರಾಜ್ ತಿಳಿಸಿದರು.

ನಗರದ ಲಯನ್ಸ್ ಸೇವಾ ಭವನದಲ್ಲಿ ನಡೆದ ಅಂತರಾಷ್ಟಿçÃಯ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಸೇವಾ ನೌಕರರನ್ನು ಸನ್ಮಾನಿಸಿ ಮಾತನಾಡಿದ ಅವರು, ಕಳೆದ ೨೫ ವರ್ಷಗಳಿಂದ ಪೌರ ಸೇವಾ ನೌಕರರಾಗಿ ಕಾರ್ಯನಿರ್ವಹಿಸಿದವರನ್ನು ಸನ್ಮಾನಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯ ಹಾಗೂ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಎಸ್.ಆರ್.ವೈದ್ಯ ಮಾತನಾಡಿ ಕಾಯಕವೇ ಕೈಲಾಸವೆಂಬ ಬಸವಣ್ಣನವರ ವಚನದ ಆಶಯದಂತೆ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ಅಂತರಾಷ್ಟಿçÃಯ ಸೇವಾ ದಿನಾಚರಣೆಯ ಈ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಲಯನ್ಸ್ ಸೇವಾ ಸಂಸ್ಥೆಯ ಅತ್ಯಂತ ಅರ್ಥಪೂರ್ಣವಾದ ಕಾರ್ಯ ಎಂದರು.
ಪ್ರತಿದಿನ ತಮ್ಮ ಕಾಯಕದಲ್ಲಿ ತೊಡಗಿಸಿಕೊಳ್ಳುವ ಪೌರಸೇವಾ ನೌಕರರು ನಗರದ ಶುಚಿತ್ವ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೌರಸೇವಾ ನೌಕರರನ್ನು ಅಂತರಾಷ್ಟಿçÃಯ ಸೇವಾ ದಿನಾಚರಣೆಯ ಸಂದರ್ಭ ಗೌರವಿಸುತ್ತಿರುವುದು ಅತ್ಯಂತ ಸಂತೋಷವನ್ನುAಟುಮಾಡಿದೆ ಎಂದು ಹೇಳಿದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿಕೃಷ್ಣ ಮಾತನಾಡಿ, ಸೇವೆಗೆ ಮತ್ತೊಂದು ಹೆಸರೇ ಪೌರಸೇವಾ ನೌಕರರು ಎಂಬುದನ್ನು ನಾವೆಲ್ಲರೂ ಮನಗಾಣಬೇಕು. ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯ ಯಶಸ್ಸಿನಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಇಂಥ ಪೌರಸೇವಾ ನೌಕರರನ್ನು ಲಯನ್ಸ್ ಸಂಸ್ಥೆ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೌರಸೇವಾ ನೌಕರರಾದ ಸುರೇಶ್, ವೆಂಕಟೇಶ್, ಲಿಂಗ ಮತ್ತು ಮುತ್ತಲ್ಗಡ್ ಅವರನ್ನು ಸನ್ಮಾನಿಸಲಾಯಿತು. ಲಯನ್ಸ್ ವಲಯಾಧ್ಯಕ್ಷ ಬಿ.ಎನ್. ವೆಂಕಟೇಶ್, ಲಯನ್ಸ್ ಕ್ಲಬ್ ಖಜಾಂಚಿ ಎಂ.ಎA. ಗಿರೀಶ್, ಹಿರಿಯ ಸದಸ್ಯರಾದ ಎಂ.ಆರ್. ನಾಗರಾಜ್, ಎಂ.ಆರ್. ಕೇಶವಮೂರ್ತಿ, ಕೆ.ಡಿ.ಪುಟ್ಟಣ್ಣ, ಲಯನ್ಸ್ ಕ್ಲಬ್ ಸದಸ್ಯ ಶಿವಣ್ಣ ಸಮಾರಂಭದಲ್ಲಿ ಉಪಸ್ಥಿತರಿದ್ದರು.