ಜಡ್ಕಲ್‌ನ ಮೆಕ್ಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಥಾಮಸ್, ಸಾಗರ್, ಶಿವಾನಂದ, ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಜಡ್ಕಲ್ ಶಾಲೆಯಲ್ಲಿ ಮೆಸ್ಕಾಂ ಸಿಬ್ಬಂದಿಗೆ ಸನ್ಮಾನ

ಇಂದಿರಾ ಎನ್ ಕೆ

ಬೈಂದೂರು: ಜಡ್ಕಲ್‌ನ ಮೆಕ್ಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಸ್ವಾತಂತ್ರೋತ್ಸವದಲ್ಲಿ ಮೆಸ್ಕಾಂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಮೆಸ್ಕಾಂ ಕೊಲ್ಲೂರು ಶಾಖೆಯ ತಾಂತ್ರಿಕ ವರ್ಗದ ಸಿಬ್ಬಂದಿ ಥಾಮಸ್, ಸಾಗರ್, ಶಿವಾನಂದ, ಇಬ್ರಾಹಿಂ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ವಿಶ್ವನಾಥ, ದಾನಿಗಳಾದ ನಾರಾಯಣ ಶೆಟ್ಟಿ ಅತ್ತಿಕಾರ್, ಅಬ್ದುಲ್ ರೆಹಮಾನ್ ಅವರನ್ನು ಗೌರವಿಸಲಾಯಿತು. ಬಳಿಕ ಮಕ್ಕಳಿಗೆ ಐಡಿ ಕಾರ್ಡ್ ವಿತರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷೆ ರಾಧಾ, ಗ್ರಾಪಂ ಉಪಾಧ್ಯಕ್ಷೆ ಭಾರತಿ ಜಿ.ಶೆಟ್ಟಿ ಅತ್ತಿಕಾರ್, ಶಾಲಾ ಸ್ಥಾಪಕಾಧ್ಯಕ್ಷ ಎಂ.ಜೆ.ಬೇಬಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಂದ್ರ ಟಿ, ಕೊಲ್ಲೂರು ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ಪೂಜಾರಿ, ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಉಪಸ್ಥಿತರಿದ್ದರು. ವಿಜಯಲಕ್ಷ್ಮೀ ಸ್ವಾಗತಿಸಿದರು. ಮಹಾಬಲ ಪೂಜಾರಿ ವಂದಿಸಿದರು. ಗೀತಾ ನಿರೂಪಿಸಿದರು.