ಜಿಲ್ಲೆ

ಪ್ರತಿಭಾ ಪುರಸ್ಕಾರ, ಶಾಸಕ, ಸಚಿವರಿಗೆ ಸನ್ಮಾನ ನಾಳೆ

ಮಂಜುನಾಥ ಅಂಗಡಿ

ಧಾರವಾಡ: ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕದಿಂದ ಅ. ೨೧ರಂದು ಮಾಹಿತಿ ಹಕ್ಕು ಅಽನಿಯಮ ಮತ್ತು ಸಿಸಿಎ ನಿಯಮಾವಳಿಗಳ ಕುರಿತು ಕಾರ್ಯಾಗಾರ, ತಜ್ಞರಿಂದ ವಿಶೇಷ ಉಪನ್ಯಾಸ ಹಾಗೂ ಜಿಲ್ಲೆಯ ನೂತನ ಶಾಸಕ, ಸಚಿವರಿಗೆ ಸನ್ಮಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಗೌರಮ್ಮ ಹಿರೇಮಠ (ರಪಾಟಿ) ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪದಾಽಕಾರಿಗಳು ಉಪಸ್ಥಿತರಿರುವರು. ಅತಿಥಿಗಳಾಗಿ ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ವೈಶುದೀಪ ಫೌಂಡೇಶನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ಉದ್ಯಮಿ ಚಂದ್ರಶೇಖರ ವಸ್ತçದ ಪಾಲ್ಗೊಳ್ಳುವರು ಎಂದರು.
ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೯೦ಕ್ಕೂ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ೧೭೩ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಮಧ್ಯಾಹ್ನ ೧೨.೩೦ಕ್ಕೆ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ, ಸಂಜೆ ೫ ಗಂಟೆಗೆ ಹಾಸ್ಯ ಸಂಜೆ ಕಾರ್ಯಕ್ರಮ ಇರಲಿದೆ. ಎನ್‌ಪಿಎಸ್ ರದ್ದತಿಗೆ ಹೋರಾಟ ಮುಂದುವರಿಯಲಿದೆ ಎಂದು ಸಿದ್ದನಗೌಡರ ತಿಳಿಸಿದರು.
ಮಂಜುನಾಥ ಯಡಹಳ್ಳಿ, ರಾಜಶೇಖರ ಬಾಣದ, ಮಲ್ಲಿಕಾರ್ಜುನ ಸೊಲಗಿ, ಗಜಾನನ ಕಟಗಿ, ಗಿರೀಶ ಚೌಡಕಿ, ಡಾ. ಸುರೇಶ ಹಿರೇಮಠ, ಮಂಜುನಾಥ ಚೌರಡ್ಡಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.