ಜಿಲ್ಲೆ

ಕನ್ನಡದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ವಿನಯ ಹೆಗಡೆ

ಸಿದ್ದಾಪುರ: ಎಸ್​ಎಸ್​ಎಲ್​ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಬುಧವಾರ ಪಟ್ಟಣದ ಬಾಲಭವನದಲ್ಲಿ ಅಭಿನಂದಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿಇಒ ಜಿ.ಐ. ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆವಹಿಸಿದ್ದರು. ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಆರ್.ಕೆ.ಹೊನ್ನೆಗುಂಡಿ ಅಭಿನಂದನಾ ಮಾತನಾಡಿದರು.

ಜಿಲ್ಲಾ ಕಸಾಪ ಗೌರ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್, ತಾಪಂ ಇಒ ದೇವರಾಜ ಹಿತ್ಲಕೊಪ್ಪ, ಬಿಆರ್​ಸಿ ಸಮನ್ವಯಾಧಿಕಾರಿ ಚೈತನ್ಯಕುಮಾರ ಕೆ.ಎಂ, ಅಕ್ಷರ ದಾಸೋಹದ ಭೂಮೇಶ ಇ.ಎಚ್, ತಾಲೂಕು ಪ್ರಾಥಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪ್ರಶಾಂತ ಜಿ.ಎಸ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷ ಎಸ್.ಎಸ್.ಪಮ್ಮಾರ್ ಇತರರಿದ್ದರು.

ತಾಲೂಕು ಕಸಾಪ ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಸುಮಿತ್ರಾ ಶೇಟ್ ಪ್ರಾರ್ಥನೆ ಹಾಡಿದರು. ಕೋಶಾಧ್ಯಕ್ಷ ಪಿ.ಬಿ.ಹೊಸೂರು ಸ್ವಾಗತಿಸಿದರು.ಸಿ.ಎಸ್.ಗೌಡರ್ ವಂದಿಸಿದರು. ಚಂದ್ರಶೇಖರ ಕುಂಬ್ರಿಗದ್ದೆ ಹಾಗೂ ಅಣ್ಣಪ್ಪ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.