ಜಿಲ್ಲೆ

ನ್ಯಾ. ಚಂದ್ರಚೂಡ, ನ್ಯಾ. ಹಿಂಚಿಗೇರಿ, ಮೊಯ್ಲಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ಶುಕ್ರವಾರ ಜರುಗಿತು. ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಧನಂಜಯ ವೈ. ಚಂದ್ರಚೂಡ, ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

5,234 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ:

ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವ್ಯಾಪ್ತಿಯ 124 ಕಾನೂನು ಪದವಿ ಕಾಲೇಜುಗಳ 3 ಮತ್ತು 5 ವರ್ಷಗಳ ಕಾನೂನು ಪದವಿ ಪಡೆದ 16 ವಿದ್ಯಾರ್ಥಿಗಳಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ ಚಿನ್ನದ ಪದಕ ಮತ್ತು ವಿವಿಧ ನಗದು ಪುರಸ್ಕಾರಗಳನ್ನು ನೀಡಿ ಗೌರವಿಸಿದರು. 5,234 ವಿದ್ಯಾರ್ಥಿಗಳಿಗೆ ಕಾನೂನು ಪದವಿ, 15 ವಿದ್ಯಾರ್ಥಿಗಳಿಗೆ ಪಿಎಚ್.ಡಿ.ಪದವಿ ಪ್ರದಾನ ಮಾಡಲಾಯಿತು.

ಕಾನೂನು ಸಚಿವ ಎಚ್.ಕೆ. ಪಾಟೀಲ, ಕುಲಪತಿ ಡಾ. ಸಿ. ಬಸವರಾಜು, ಕುಲಸಚಿವರಾದ ಡಾ. ರತ್ನಾ ಭರಮಗೌಡರ, ಅನುರಾಧಾ ವಸ್ತçದ ಇದ್ದರು.