ಜಿಲ್ಲೆ

ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಡಿ ಸ್ಥಾನ ನೀಡಲಿ

ಹೂವಿನಹಡಗಲಿ: ಕಾಂಗ್ರೆಸ್ ಪಕ್ಷ ಈ ಬಾರಿಯ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯದಡಿ ಎಡಗೈ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಲಿ ಎಂದು ಎನ್‌ಎಸ್‌ಯುವೈ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕಾರ್ಯದರ್ಶಿ ಕೆ.ತಿಪ್ಪೇಸ್ವಾಮಿ ಹೊಸಮನಿ ಒತ್ತಾಯಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಇದುವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವ ಫಲಾಪೇಕ್ಷೆಗಳನ್ನು ಬಯಸದೆ ನಿರಂತರ ಪಕ್ಷ ಸಂಘಟನೆ ಮಾಡುತ್ತ ಬಂದು 2023ರ ಚುನಾವಣೆಯಲ್ಲಿ ಗೋವಿಂದ ಕಾರಜೋಳಗಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಆರ್.ಬಿ.ತಿಮ್ಮಾಪುರಗೆ ಪಕ್ಷದಿಂದ ಸಾಕಷ್ಟು ಬೆಂಬಲ, ಪ್ರೋತ್ಸಾಹ ದೊರೆತಿವೆ.

ಆದರೆ ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ರಾಜ್ಯ ಮಾದಿಗ ಎಡಗೈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೋರಾಟ ಸಮಿತಿ ರಾಜ್ಯ ಸಂಚಾಲಕ ಹಲಗಿ ಸುರೇಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕಿ ಕೆ.ಲಲಿತಮ್ಮ, ಡಾ.ಬಾಬುಜಗಜೀವನ್ ರಾವ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ನವಲಿ ಶಶಿಧರ, ದಲಿತ ಮುಖಂಡಾದ ಜೆ.ಶಿವರಾಜ, ಎಚ್.ಸ್ವಾಮಿ, ಭರಮಪ್ಪ, ಎ.ಜಯಕೀರ್ತಿ, ಸಿ.ಹನುಮಂತಪ್ಪ ಇತರರಿದ್ದರು.