ಹೊಸಪೇಟೆ: ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಿಂದ ಸೋಮವಾರ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆAಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಹಲವಾರು ಭಿಗಿ ಭದ್ರತೆ ಒದಗಿಸಿದರೂ ಸಹ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕು. ಜಮ್ಮು ಕಾಶ್ಮೀರದಲ್ಲಿ ಈಗಾಗಲೇ 371 ರದ್ದಾಗಿ ಶಾಂತಿ ಸಹಬಾಳ್ವೆ ಇದ್ದರೂ ಸಹ ಮೇಲಿಂದ ಮೇಲೆ ಇಂತಹ ದುಷ್ಟ ಕೃತ್ಯ ಎಸಗುತ್ತಿರುವದು ಖಂಡನೀಯ. ಇಂತಹ ಕೃತ್ಯಗಳು ಮರುಕಳಿಸದಿರುವಂತೆ ಇನ್ನಷ್ಟು ಬಿಗಿ ಭದ್ರತೆ ಹಾಗೂ ಪ್ರವಾಸಿ ತಾಣಗಳಿಗೆ ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದರು.