ಜಿಲ್ಲೆ

ಪುತ್ತೂರಿನಿಂದ ನಡೆದ ಬೃಹತ್ ಹೊರೆಕಾಣಿಕೆ ಮೆರವಣಿಗೆ

Mangaluru - Nishantha Narayana

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ಅಂಗವಾಗಿ ಪುತ್ತೂರಿನಿಂದ ನಡೆದ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಚಾಲನೆ ನೀಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್, ವೀಣಾ ಬಿ.ಕೆ., ಶೇಖರ್ ನಾರಾವಿ, ಮಾಜಿ ಶಾಸಕ ಸಂಜೀವ ಮಠಂದೂರು, ಕಾಂಗ್ರೆಸ್ ಮುಖಂಡರಾದ ಹೇಮನಾಥ ಶೆಟ್ಟಿ ಕಾವು, ಜಯಪ್ರಕಾಶ್ ಬದಿನಾರು, ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಮಾಜಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಸದಸ್ಯರಾದ ಡಾ.ಸುರೇಶ್ ಪುತ್ತೂರಾಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.