ಜಿಲ್ಲೆ

ಹುಬ್ಬಳ್ಳಿಯಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಸಾಗರ ಮೂಲದ ಐವರು ಸ್ಥಳದಲ್ಲೇ ದುರಂತ ಸಾವು! Road Accident

Road Accident : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ದುರಂತ ಸಾವಿಗೀಡಾಗಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ಇಂದು (ಮೇ 06) ಬೆಳಗ್ಗೆ ನಡೆದಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್‌ ಬಳಿ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಐವರು ಸ್ಥಳದಲ್ಲೇ ದುರಂತ ಸಾವಿಗೀಡಾಗಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿಯ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಪಟ್ಟವರು ಗುರುತು ಪರಿಚಯ ಸದ್ಯಕ್ಕೆ ದೊರಕಿಲ್ಲ. ಶವಗಳನ್ನು ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಗೆ ರವಾನಿಸುತ್ತಿದ್ದಾರೆ.

ಅಪಘಾತಕ್ಕೀಡಾದ ಕಾರು ಬೆಂಗಳೂರಿನದು ಎಂದು ತಿಳಿದು ಬಂದಿದೆ. ಅಪಘಾತ ಬೆನ್ನಲ್ಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.