Horticulture Crops Training Workshop sulibele 
ಜಿಲ್ಲೆ

ಆರ್ಥಿಕ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಪೂರಕ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಸೂಲಿಬೆಲೆ
ಕೃಷಿ ಅವಲಂಬಿತ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೂರಕವಾಗಿದೆ ಎಂದು ಸಂಸ್ಥೆಯ ವಲಯ ಮೇಲ್ವಿಚಾರಕ ಚಂದನ್ ಹೇಳಿದರು.
ಹೋಬಳಿಯ ಕಂಬಳೀಪುರ ಗ್ರಾಪಂನ ಬೀಮಕನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸೋಮವಾರ ಹಮ್ಮಿಕೊಂಡಿದ್ದ ಕೃಷಿ ಸಮಗ್ರ ತೋಟಗಾರಿಕೆ ಬೆಳೆಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಮಾತನಾಡಿದರು. ಕೃಷಿ ಅವಲಂಬಿತ ಕುಟುಂಬಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪ್ರಗತಿ ನಿಧಿ ವಿತರಣೆ ಮಾಡುತ್ತಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದರು.
ಸಂಸ್ಥೆಯ ಕೃಷಿ ಮೇಲ್ವಿಚಾರಕ ಚೇತನ್ ಮಾತನಾಡಿ, ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಕೃಷಿ ಅಧಾರಿತ ಕಾರ್ಯಕ್ರಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಅಧಿಕಾರಿ ಸೋಮಶೇಖರ್ ಮಾತನಾಡಿ, ಇಲಾಖೆಯಿಂದ ವಿವಿಧ ರೀತಿಯ ಯೋಜನೆಗಳು ಅನುಷ್ಠಾನ ಮಾಡಲಾಗಿದ್ದು, ರೈತಾಪಿ ವರ್ಗ ಇದರ ಪ್ರಯೋಜನ ಪಡೆಯಬೇಕು ಎಂದ ಅವರು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ವಿವಿಧ ಸೌಲಭ್ಯ ವಿತರಣೆ ಮಾಡಲಾಗುತ್ತದೆ. ಪ್ರಧಾನಮಂತ್ರಿ ಕೃಷಿ ಸಿಧಿ, ಹನಿ ನೀರಾವರಿ ಯೋಜನೆ, ಆಟಲ್ ಭೂ ಜಲ ಯೋಜನೆ, ಹಸಿರು ಮನೆ ನಿರ್ಮಾಣ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಯಾಂತ್ರಿಕರಣದ ಬಗ್ಗೆ ಮಾಹಿತಿ ನೀಡಿದರು.