ಹೊಸದುರ್ಗ: ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಮುಂದಿನ 3 ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯನ್ನು ಹಸಿರು ಜಿಲ್ಲೆಯಾಗಿ ಪರಿವರ್ತಿಸುವ ಸಂಕಲ್ಪದಿಂದ ಪರಿಸರ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಸಸಿ ನೆಡುವ ಕಾರ್ಯಕ್ರಮ ಆಯೋಜಿಸುವ ಮೂಲಕ ಕನಿಷ್ಠ 5 ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ತಿಳಿಸಿದರು.