ಜಿಲ್ಲೆ

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ ಸೇರುವುದು ಅಧಿಕೃತ

ಬೆಂಗಳೂರು: ಕಳೆದ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದು ಹವಾ ಸೃಷ್ಟಿಸಿರುವ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಈಗ ಅಧಿಕೃತಗೊಂಡಿದೆ.

ಶರತ್, ಫೆ 22 ರಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​​ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಿನ ಯಡಿಯೂರಪ್ಪ ಸರ್ಕಾರದ ಸಚಿವ ಎಂಟಿಬಿ ನಾಗರಾಜ್ ಅವರ ವಿರುದ್ಧ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್ ವಿರುದ್ಧ ಮುನಿಸಿಕೊಂಡಿದ್ದರು.