ಹೊಸಪೇಟೆ: ಈ ಸಾಲಿನ ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಂಗಾರು ಹಂಗಾಮಿಗೆ ಆ.31 ರೊಳಗೆ ಮತ್ತು ಹಿಂಗಾರು ಹಂಗಾಮಿಗೆ ನ.30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕೃಷಿ ಪ್ರಶಸ್ತಿಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.