ಜಿಲ್ಲೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಜುನಾಥ

ಹೊಸಪೇಟೆ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ಕಾನೂನು ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ಜು.31ರವರೆಗೆ ವಿಸ್ತರಿಸಲಾಗಿದೆ.

ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08394-796292 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.