ಹೊಸಪೇಟೆ: ಸಮಾಜ ಕಲ್ಯಾಣ ಇಲಾಖೆಯಿಂದ ಈ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಕಾನೂನು ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುಲು ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈ ಅರ್ಜಿ ಅವಧಿಯನ್ನು ಸೆ.30ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಇಲಾಖೆಯ ವೆಬ್‌ಸೈಟ್ www.sw.kar.nic.in. ನಲ್ಲಿ Stipend To Law Graduate ರಲ್ಲಿ ಅರ್ಜಿ ಸಲ್ಲಿಸಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.