ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅ.30ರ ವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ, ಸಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
https://ssp.postmatric.karnataka.gov.in ವೆಬ್‌ಲೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿ ಪಡೆಯಲು https://bcwd.karnataka.gov.in ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂ.ಸಂ: 8050770005, ಇ-ಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ದೂ. ಸಂ: 1902 ಅಥವಾ ಇ-ಮೇಲ್ postmatrichelp@karnataka.gov.in ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.