ಜಿಲ್ಲೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಂಜುನಾಥ

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸಾಲಿನ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.20ರ ವರೆಗೆ ವಿಸ್ತರಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿ ಪಡೆಯಲು https://bcwd.karnataka.gov.in ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂ.ಸಂ: 8050770005, ಇ-ಮೇಲ್ bcwdhelpline@gmail.com ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ದೂ. ಸಂ: 1902 ಅಥವಾ ಇ-ಮೇಲ್ postmatrichelp@karnataka.gov.in ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಮಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.