ಜಿಲ್ಲೆ

ಶಾಶ್ವತ ಆರೋಗ್ಯಕ್ಕೆ ಆಯುರ್ವೇದ ಚಿಕಿತ್ಸೆ ಪರಿಹಾರ

ಹೊಸಪೇಟೆ : ಪ್ರತಿಯೊಬ್ಬರಲ್ಲಿ ಯಾವುದೇ ದೈಹಿಕ ಮತ್ತು ಮಾನಸಿಕ ಸಮಸ್ಯೆ ಇಲ್ಲದೆ ಸದೃಡ ಆರೋಗ್ಯ ಜೀವನಕ್ಕೆ ಆಯುರ್ವೇದ ಗಿಡಮೂಲಿಕೆಗಳು ಮತ್ತು ಔಷಧಿಗಳು ಅಗತ್ಯ ಎಂದು ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮುನಿವಾಸುದೇವ ರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಆಯುಷ್ ಫೆಡೆರೇಷನ್ ಆಪ್ ಇಂಡಿಯಾ (ಎಎಫ್‌ಐ)ದಿಂದ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಶನಿವಾರ ಆಯುರ್ವೇದ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪುರಾತನ ಕಾಲದಿಂದಲೂ ದೇಶಿಯ ಆಯುರ್ವೇದ ಚಿಕಿತ್ಸೆಗೆ ಬಹಳಷ್ಟು ಮಹತ್ವವಿದೆ. ಆಯುರ್ವೇದವು ಕೇವಲ ರೋಗಲಕ್ಷಣಗಳನ್ನು ನಿಗ್ರಹಿಸುವುದಲ್ಲದೆ, ಸಮಸ್ಯೆಯ ಮೂಲ ಕಾರಣವನ್ನು ಗುರುತಿಸಿ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ಕ್ರಮವಾಗಿದೆ. ದೇಹದ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದದಲ್ಲಿ ಔಷೋಧಪಾಚಾರವಿದೆ. ಪ್ರತಿ ವ್ಯಕ್ತಿಯ ದೇಹದ ಪ್ರಕೃತಿ (ದೋಷಗಳು) ವಿಭಿನ್ನವಾಗಿರುತ್ತದೆ. ಆಯುರ್ವೇದವು ಪ್ರತಿಯೊಬ್ಬರಿಗೂ ವ್ಯಕ್ತಿಯ ಪ್ರಕೃತಿ ಅನುಸಾರವಾಗಿ ಚಿಕಿತ್ಸೆ ನೀಡುವ ಮೂಲಕ ಶಾಶ್ವತ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಬಹುದು ಎಂದರು.

ಆಯುಷ್ ವೈದ್ಯಾಧಿಕಾರಿ ಡಾ.ಕೆ.ಎಚ್.ಗುರುಬಸವರಾಜ್ ಮಾತನಾಡಿ, ಆಯುರ್ವೇದ ಚಿಕಿತ್ಸೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹವನ್ನು ಒಳಗಿನಿಂದ ಬಲಪಡಿಸುವ ಮೂಲಕ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರಿಂದಾಗಿ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಶೀಘ್ರ ಚೇತರಿಕೆ ಸಾಧ್ಯವಿದೆ. ಆಯುರ್ವೇದದ ಬಗ್ಗೆ ಸಾರ್ವಜನಿಕರು ಹೆಚ್ಚಿನ ಆಸಕ್ತಿಯನ್ನು ಹೊಂದುವ ಮೂಲಕ ಚಿಕಿತ್ಸೆಗೆ ಮುಂದಾಗಬೇಕಿದೆ. ಆಯುರ್ವೇದವು ಯೋಗ, ಧ್ಯಾನ, ಮಸಾಜ್ ಮತ್ತು ಉಸಿರಾಟದ ವ್ಯಾಯಾಮಗಳ ಮೂಲಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ ಎಂದರು.

ಸೆ.23 ರಂದು ನಡೆಯಲಿರುವ ರಾಷ್ಟಿçÃಯ ಆಯುರ್ವೇದ ದಿನಾಚರಣೆ ನಿಮಿತ್ತ ನಡೆದ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು.

ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಶಿವಶರಣಯ್ಯ, ಡಾ.ರೂಪ್ ಸಿಂಗ್ ರಾಥೋಡ್, ಡಾ.ಹೇಮಲತಾ, ಪ್ರಮುಖರಾದ ಡಾ.ಕೇದಾರ್ ದಂಡಿನ್, ಡಾ.ಬಿ.ವಿ.ಭಟ್, ಕಿರಣ್ ಇತರರಿದ್ದರು