ಹೊಸಪೇಟೆ: ದೆಹಲಿ ಚುನಾವಣೆಯಲ್ಲಿ ಗೆಲವಿನ ಹಿನ್ನಲೆಯಲ್ಲಿ ನಗರದ ಡಾ.ಪುನೀತ್ ರಾಜಕುಮಾರ್ ವೃತ್ತದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರಿಂದ ಸಿಹಿ ಅಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಳ್ಳಿ ತಿಮ್ಮಪ್ಪ ಮಾತನಾಡಿ, ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟ್ಟಾಚಾರಕ್ಕೆ ಬಲಿಯಾಗಿದೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರ ಮುಖವಾಡ ಕಳಚಿಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ತಾತ್ಕಾಲಿಕ ಗ್ಯಾರೆಂಟಿಗಿಂತ ದೃಢ ನಾಯಕತ್ವ ಕೊಡುವ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ದೆಹಲಿ ಮತದಾರರು ಮತ್ತೊಮ್ಮೆ ರುಜುವಾತು ಮಾಡಿದ್ದಾರೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಪ್ರಮುಖರಾದ ಅಶೋಕ್ ಜೀರೆ, ಚಂದ್ರು ದೇವಲಾಪುರ, ರೇವಣ್ಣ ಸಿದ್ದಪ್ಪ, ಹೊನ್ನೂರಪ್ಪ, ವೀರಣ್ಣ ಗೌಡ, ಉಮಾದೇವಿ, ಪೂರ್ಣಿಮಾ, ಅನುರಾಧ, ಮಹಾದೇವಿ ಇತರರಿದ್ದರು.