ಹೊಸಪೇಟೆ: ನಗರದ ಭಟ್ರಳ್ಳಿ ಆಂಜನೇಯ ದೇಗುಲದ ಆವರಣದಲ್ಲಿ ಶನಿವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಮಾತನಾಡಿ, ಪ್ರತಿ ಬೂತ್‌ನಲ್ಲಿ ಕನಿಷ್ಠ 300 ಜನರನ್ನು ಸದಸ್ಯರಾಗಿ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಮAಡಲ ಅಧ್ಯಕ್ಷ ಶಂಕರ್ ಮೇಟಿ ಮಾತನಾಡಿ, ಬಿಜೆಪಿ ವಿಶ್ವದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ಪಕ್ಷವಾಗಿದೆ. ಸಾಮಾಜಿಕ ನ್ಯಾಯ ನೀಡುವ ಪಕ್ಷವಾಗಿದೆ. ಸಾಮಾನ್ಯ ಕಾರ್ಯಕರ್ತರಿಗೂ ಪಕ್ಷದಲ್ಲಿ ಗೌರವವಿದೆ ಎಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷೆ ಭಾರತಿ ಪಾಟೀಲ್. ಜಿಲ್ಲಾ ವಕ್ತರ ಅಶೋಕ್ ಜೀರೆ, ಪ್ರಮುಖರಾದ ಮನೋಹರ್ ಗುಪ್ತ, ಚಂದ್ರು ದೇವಲಾಪುರ, ರೇಣುಕಾ, ಬಸುವರಾಜ್ ಗೌಳಿ, ಹೊನ್ನೂರಪ್ಪ ಇತರರಿದ್ದರು.