ಹೊಸಪೇಟೆ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ವಿಧಾನಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಸಮಾವೇಶ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು. 
ಜಿಲ್ಲೆ

ಸಾಲದ ಸುಳಿಗೆ ಸಿಲುಕಿದೆ ರಾಜ್ಯ ಸರ್ಕಾರ

ಮಂಜುನಾಥ

ಹೊಸಪೇಟೆ: ರಾಹುಲ್ ಗಾಂಧಿ ಗ್ರಾಮ ಫೋನ್ ಇದ್ದಂತೆ. ಅವರು ವಿರೋಧ ಪಕ್ಷದ ನಾಯಕನಾಗಲು ಕೂಡ ಅರ್ಹರಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಧಾನಪರಿಷತ್‌ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಕಣ, ಕಣದಲ್ಲಿ ಭ್ರಷ್ಟಾಚಾರ ಅಡಗಿದೆ. ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ ಕಾಲದಿಂದಲೂ ಒಂದಿಲ್ಲೊಂದು ಹಗರಣ ನಡೆದಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದ ಅವಧಿಯಲ್ಲಿ 12 ಲಕ್ಷ ಕೋಟಿ ರೂ. ಜೋಶಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಸೋಲುವುದು ಗ್ಯಾರಂಟಿ. ದೇಶದಲ್ಲಿ 50 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲಲ್ಲ. ಮತ್ತೊಮ್ಮೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ 1 ಕಿಮೀ ರಸ್ತೆಯನ್ನು ಸಹ ಮಾಡಿಲ್ಲ. ಕಾಂಗ್ರೆಸ್‌ ಶಾಸಕರಲ್ಲಿ ನಿರಾಸೆ ಮೂಡಿದೆ. ಕಳೆದ ಎರಡೂರು ತಿಂಗಳಿಂದ ಸರ್ಕಾರಿ, ಅರೆ ಸರ್ಕಾರಿ, ಬಿಸಿಯೂಟ ಸೇರಿ ಇತರ ನೌಕರರಿಗೆ ಸಂಬಳವಿಲ್ಲ. ಸರ್ಕಾರ ಸಾಲದ ಸುಳಿಯಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ನೇಹಾ ಹತ್ಯೆ ಬಗ್ಗೆ ಸಿಎಂ ಹಗುರವಾಗಿ ಮಾತನಾಡಿದ ಪರಿಣಾಮ ಅಂಜಲಿ ಹತ್ಯೆ ನಡೆದಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್‌ ಮುಖ್ಯ ಸಚೇತಕ ರವಿಕುಮಾರ್, ಹೂವಿನಹಡಗಲಿ ಶಾಸಕ ಕೃಷ್ಣ ನಾಯ್ಕ, ಮಾಜಿ ಸಚಿವ ಆನಂದ ಸಿಂಗ್, ಪ್ರಮುಖರಾದ ಬಂಗಾರು ಹನುಮಂತ, ಶಂಕರ ಮೇಟಿ, ಓದೋ ಗಂಗಪ್ಪ, ಅಶೋಕ ಜೀರೆ, ಅಯ್ಯಾಳಿ ತಿಮ್ಮಪ್ಪ, ಭೂಪಾಳ ರಾಘವೇಂದ್ರ ಶೆಟ್ಟಿ, ಬಲ್ಲಾಹು ರಾಮಣ್ಣ, ಆರತಿ, ಪೂಜಾ, ಡಾ.ಹನುಮಂತ ರಾವ್ ಇತರರಿದ್ದರು.