ಜಿಲ್ಲೆ

ಲೇಖಕರಿಂದ ಪುಸ್ತಕ ನೋಂದಣಿಗೆ ಅವಕಾಶ

ಮಂಜುನಾಥ

ಹೊಸಪೇಟೆ: 2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಯಾವುದೇ ಭಾಷೆಯ ಪುಸ್ತಕಗಳ ನೋಂದಣಿ ಮಾಡಿಸಬಹುದಾಗಿದೆ.

ನೋಂದಣಿ ಮಾಡಿಸಿದ ಪುಸ್ತಕಗಳನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು. ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ 2025ರ ಜ.01 ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಆಯುಕ್ತರ ಕಚೇÃರಿಯ ದೂರವಾಣಿ ಸಂಖ್ಯೆ: 080-22864990, 22867358 ಮತ್ತು ಹೊಸಪೇಟೆ ಜಿಲ್ಲಾ ಕ್ರೀಡಾಂಗಣ ಹತ್ತಿರದ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸದೆ.