ಹೊಸಪೇಟೆ: ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲೂಕಿನ ಗುಂಡ್ಲುವದುಗೇರಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಯುವರಾಜ್ ಎಂಬುವ ಮಗ ಅಜಯ್ (8) ಮೃತ ದುರ್ದೈವಿ. ಆಟ ಆಡುತ್ತ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಎಚ್.ಆರ್.ಗವಿಯಪ್ಪ ಭೇಟಿ ಕುಟುಂಬಸ್ಥರಿಗೆ ಶಾಂತವನಾಗಿ ಹೇಳಿದರು.