ಹೊಸಪೇಟೆ: ಮಕ್ಕಳು ರಾಷ್ಟçದ ಸಂಪತ್ತು. ಬಾಲ್ಯಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಶಿಕ್ಷಣ ಅವಕಾಶಗಳಿಂದ ವಂಚಿತರನ್ನಾಗಿಸುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಂಪಿಗೆ ಸಾಂಸ್ಕçತಿಕ ಕಲಾ ಟ್ರಸ್ಟ್ನಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಗುರುವಾರ ಬಾಲ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಬೀದಿ ನಾಟಕ ಮತ್ತು ಜನಜಾಗೃತಿ ಹಾಡುಗಳ ಮೂಡಿಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು,
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧ. 18 ವರ್ಷದೊಳಗಿನ ಕಿಶೋರ ಬಾಲಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳ ಶಿಕ್ಷಣಕ್ಕೆ ಮಾರಕವಾಗದಂತೆ ಮಗುವಿನ ಕುಟುಂಬ ನೋಡಿಕೊಳ್ಳಬೇಕು. ಉದ್ದಿಮೆಗಳಲ್ಲಿ ಹಾಗೂ ಬಾಲನಟ, ನಟಿಯಾಗಿ ಕೆಲಸ ನಿರ್ವಹಿಸಲು ಸೀಮಿತ ಅವಕಾಶವನ್ನು ಮಾತ್ರ ಕಲ್ಪಿಸಲಾಗಿದೆ. ಬಾಲಕಾರ್ಮಿಕ ಪದ್ದತಿಯನ್ನು ಅಳಿಸಿ, ಮಕ್ಕಳನ್ನು ಶಾಲೆಗೆ ಕಳುಹಿಸಿ ಶಿಕ್ಷಣವಂತರನ್ನಾಗಿಸಲು ಪಾಲಕರು ಕಾಳಜಿ ವಹಿಸಬೇಕು ಎಂದರು.
ಮಕ್ಕಳ ಬಾಲ್ಯವನ್ನು ಉಳಿಸೋಣ, ಅವರ ದುಡಿತ ತಪ್ಪಿಸಿ, ವಿದ್ಯೆ, ಆರೋಗ್ಯವನ್ನು ಒದಗಿಸಿ, ದೇಶದ ಉನ್ನತಿಗೆ ಶ್ರಮಿಸೋಣ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಶಾಲೆಗೆ ಸೇರಿಸಲು ಸಾರ್ವಜನಿಕರು ಕೈ ಜೋಡಿಸಬೇಕು. ಕೇವಲ ಸರ್ಕಾರ ಮಾತ್ರ ಬಾಲಕಾರ್ಮಿಕ ಪದ್ದತಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಸಾರ್ವಜನಿಕರು ಮತ್ತು ಸಂಘಸAಸ್ಥೆಗಳು ಸರ್ಕಾರ ಹಾಗೂ ಇಲಾಖೆಗಳ ಜತೆಗೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ಎ.ಮೌನೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ಬಿಇಒ ಶೇಖರಪ್ಪ ಹೊರಪೇಟೆ, ಕಾರ್ಮಿಕ ಇಲಾಖೆ ನಿರೀಕ್ಷಕ ಶಿವಶಂಕರ್ ತಳವಾರ, ಗೋಪಾಲ ದೂಪದ್ ಇತರರಿದ್ದರು