ಹೊಸಪೇಟೆ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅ.೦೩ ಕೊನೆಯ ದಿನವಾಗಿದೆ. ನಗರದ ಬಸವೇಶ್ವರ ಬಡಾವಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.