ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. 
ಜಿಲ್ಲೆ

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮಂಜುನಾಥ

ಹೊಸಪೇಟೆ:  ವಿಜಯನಗರ ಜಿಲ್ಲೆಯಾಗಿ ನಾಲ್ಕು ವರ್ಷ ಕಳೆಯುತ್ತಿದೆ. ಮೊದಲ ಬಾರಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ತ್ರೈಮಾಸಿಕ ಕೆಡಿಪಿ ಸಭೆ ಶುಕ್ರವಾರ ನಡೆಸಿದರು.

ಬಳ್ಳಾರಿ ಜಿಲ್ಲೆ ತೋರಣಗಲ್ ನ ಜಿಂದಾಲ್ ನಿಂದ ನಗರಕ್ಕೆ ಬಂದು, ಅನಂತಶಯನಗುಡಿಯಲ್ಲಿರುವ ತಮ್ಮ ಆಪ್ತ ಬಸವರಾಜ ದೇವರಮನಿ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ರೈತ ಸಂಘಟನೆಗಳು ಸೇರಿದಂತೆ 30 ಕ್ಕೂ ಹೆಚ್ಚಿನ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬಳಿಕ ಕೆಡಿಪಿ ಸಭೆಯತ್ತ ತೆರಳಿದ ಸಿದ್ದರಾಮಯ್ಯ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಕೆಡಿಪಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವುದಾಗಿ ಅವರು ಈ ಮೊದಲೇ ಪ್ರಕಟಿಸಿದ್ದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿಗಳಾದ ಬಸವರಾಜ ರಾಯರೆಡ್ಡಿ, ಗೋವಿಂದರಾಜ್, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಇದ್ದರು.