ಹೊಸಪೇಟೆ: ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪದವಿ ಕಾಲೇಜಿಗೆ ಬುಧವಾರ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಶೋಭಾ ಭೇಟಿ ನೀಡಿ ಮೂಲಭೂತ ಸೌಕರ್ಯ ಸೇರಿದಂತೆ ಇತರೆ ಸೌಕರ್ಯಗಳನ್ನು ಪರಿಶೀಲಿಸಿದರು.
2007ರಲ್ಲಿ ಪ್ರಾರಂಭವಾದ ಕಾಲೇಜು ಪ್ರಸ್ತುತ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಅತಿಥಿ ಉಪನ್ಯಾಸಕರ ಸಭೆ ನಡೆಸಿ ಕಾಲೇಜಿನ ಪ್ರಗತಿಯ ಮಾಹಿತಿ ಪಡೆದರು. ತರಗತಿಗಳು, ಪ್ರಯೋಗಾಲಯ, ಗ್ರಂಥಾಲಯ, ಮತ್ತು ಶೌಚಾಲಯದ ವ್ಯವಸ್ಥೆಗಳನ್ನು ಪರಿಶೀಲಿಸಿ. ಕಾಲೇಜಿಗೆ ಅವಶ್ಯಕತೆ ಇರುವ ಇನ್ನಿತರ ಸೌಲಭ್ಯಗಳನ್ನು ಒದಗುತ್ತದೆ. ಅತಿಥಿ ಉಪನ್ಯಾಸಕರಿಗೆ ಅವರ ಸಮಸ್ಯೆಗಳನ್ನು ಆದಷ್ಟು ಬೇಗನೆ ಬಗೆಹರಿಸುವ ಭರವಸೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಜಿ.ಹೆಬಸೂರ್ ಇತರರಿದ್ದರು.