ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ 
ಜಿಲ್ಲೆ

ಗುಪ್ತ ಕಾರ್ಯಾಚರಣೆಯಿಂದ ಚುರುಕು ಮುಟ್ಟಿಸಿ

ಮಂಜುನಾಥ

ಹೊಸಪೇಟೆ: ಭ್ರೂಣಹತ್ಯೆ ತಡೆಯಲು ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 84 ಡೆಂಗೆ ಶಂಕಿತ ಪ್ರಕರಣಗಳಲ್ಲಿ 16 ಮಕ್ಕಳಲ್ಲಿ ದೃಢಪಟ್ಟಿದ್ದು, ಉಳಿದವರು ಆರೋಗ್ಯವಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತ, ಸಮಾಜ ಕಲ್ಯಾಣ ಮತ್ತು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ, ವಸತಿ ಶಾಲೆ, ಶಾಲೆಗಳು, ಅಂಗನವಾಡಿಗಳಲ್ಲಿ ಮಕ್ಕಳಿಗೆ ನಿರಂತರ ವೈದ್ಯಕೀಯ ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 218 ಬಾಲಗರ್ಭಿಣಿಯರು ಪತ್ತೆಯಾಗಿದ್ದು, ಈ ಕುರಿತು 53 ಪ್ರಕರಣ ದಾಖಲಾಗಿದೆ. ಉಳಿದ ಪ್ರಕರಣಗಳಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ 2022ರಲ್ಲಿ 34, 2023ರಲ್ಲಿ 39 ಮತ್ತು 2024ರಲ್ಲಿ ಈವರೆಗೆ 18 ಸೇರಿ ಒಟ್ಟು 91 ಫೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಈವರೆಗೆ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದ್ದು, ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೆ ಪೊಲೀಸ್ ಇಲಾಖೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 5 ಸರಕಾರಿ ಸೇರಿದಂತೆ ಒಟ್ಟು 72 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಹೊಸಪೇಟೆ ನಗರ ಪ್ರದೇಶದಲ್ಲಿ ಆರ್.ಎಂ, ಶ್ರೀಕರಿ, ಶ್ರೀಪತಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲು ಸೂಚಿಸಿದ್ದೇನೆ. ಸ್ಕಾö್ಯನಿಂಗ್ ಸೆಂಟರ್‌ಗಳನ್ನು ತಂಡ ರಚಿಸಿ ಗುಪ್ತ ಕಾರ್ಯಾಚರಣೆ ಮಾಡಬೇಕು. ಲೋಪದೋಷಗಳಿದ್ದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಈವರೆಗೆ ನವಜಾತ ಶಿಶುಗಳ ಮರಣ ಒಂದು ಸಾವಿರಕ್ಕೆ 24, ತಾಯಿ ಮರಣ 1 ಲಕ್ಷಕ್ಕೆ 48, ಮಗು ಹುಟ್ಟುವ ಮುನ್ನ 41 ಶಿಶುಗಳು ಸಾವಾಗುತ್ತಿದೆ. ಈ ಬಗ್ಗೆ ಕ್ರಮ ವಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 462 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಸಿಡಿಪಿಒ ಸಮನ್ವಯತೆಯಿಂದ ಕೆಲಸ ಮಾಡಿ ಮಕ್ಕಳ ಆರೋಗ್ಯ ಚೇತರಿಕೆಗೆ ಶ್ರಮಿಸಬೇಕು ಎಂದರು.

ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ 98 ಬಾಲ್ಯ ವಿವಾಹ ಪ್ರಕರಣಗಳಲ್ಲಿ 89 ಮದುವೆಗಳನ್ನು ತಡೆಹಿಡಿಯಲಾಗಿದೆ. 9 ಪ್ರಕರಣಗಳಲ್ಲಿ ಎಫ್ ಐಆರ್ ಆಗಿದೆ. 24 ಬಾಲ ಕಾರ್ಮಿಕರು ಪತ್ತೆಯಾಗಿದ್ದು, 22 ಪ್ರಕರಣ ದಾಖಲಿಸಲಾಗಿದೆ. 98 ಬಾಲ್ಯ ವಿವಾಹ ನಡೆಯುತ್ತಿರುವ ದೂರು ಬಂದಿದ್ದು, 89 ತಡೆದು 9 ಪ್ರಕರಣ ದಾಖಲಿಸಲಾಗಿದೆ ಎಂದರು.