ಹೊಸಪೇಟೆ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅ.04, ಅ.05 ಮತ್ತು ಅ.06ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅ.04ರ ಸಂಜೆ 05.30ಕ್ಕೆ ಗದಗ್‌ನಿಂದ ಆಗಮಿಸಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ.05ರಂದು ಬೆಳಿಗ್ಗೆ 10.30ಕ್ಕೆ ನಗರದ ಬಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರೈತರ ಕ್ಷೇಮಾಭಿವೃದ್ಧಿ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಅ.06ರಂದು ಬೆ.10.30ಕ್ಕೆ ತಾಲೂಕಿನ ನಾಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯುವ ನಾಗೇನಹಳ್ಳಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 02.30ಕ್ಕೆ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.