ಜಿಲ್ಲೆ

ಸಾಮಾನ್ಯ ಪ್ರವೇಶ ಪರೀಕ್ಷೆ ನಿಷೇದಾಜ್ಞೆ ಜಾರಿ

ಮಂಜುನಾಥ

ಹೊಸಪೇಟೆ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುವ ಐಎಎಸ್, ಕೆಎಎಸ್ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಹಿನ್ನೆಲೆ ಅಕ್ಟೋಬರ್ 06ರಂದು ನಗರದ ಜಂಬುನಾಥ ಹಳ್ಳಿಯ ಡಾ.ಎ.ಪಿ.ಜೆ.ಅಬ್ದುಲ ಕಲಾಂ ಮಾದರಿ ವಸತಿ ಶಾಲೆಯ ಪರೀಕ್ಷಾ ಕೇಂದ್ರ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಆದೇಶ ಹೊರಡಿಸಿದ್ದಾರೆ.

ಅ.06ರಂದು ಬೆಳಿಗ್ಗೆ 10 ರಿಂದ 12.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ರಿಂದ 2.45 ಗಂಟೆವರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.