ಹೊಸಪೇಟೆ: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ನೀಡಿದ ಸೂಚನೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಅಲರ್ಟ್ ಆಗಿದ್ದು. ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ.
ನಗರದ ಮಹಿಳೆ ಯೊಬ್ಬರಲ್ಲಿ ಕೋವಿಡ್ ಸೋಂಕು ಕಂಡು ಬಂದ ಹಿನ್ನಲೆಯಲ್ಲಿ ತೀವ್ರ ಎಚ್ಚರಿಕೆ ವಹಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆ ವ್ಯಾಪ್ತಿಯ 5 ಸಾರ್ವಜನಿಕ ಆಸ್ಪತ್ರೆ ಹಾಗೂ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಪ್ರತ್ಯೇಕ ವಾರ್ಡ್ ಸಿದ್ದಪಡಿಸಿದೆ.
ಡಿಎಚ್‌ಒ ಡಾ.ಶಂಕರ್ ನಾಯ್ಕ್ಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ಮಹಿಳೆಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ, ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ 5 ಸಾರ್ವಜನಿಕ ಆಸ್ಪತ್ರೆ ಹಾಗೂ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ವಾರ್ಡ್ ಸಿದ್ದಪಡಿಸಲಾಗಿದೆ. ಆಕ್ಸಿಜನ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಐ.ಎಲ್.ಐ ಮತ್ತು ಸಾರಿಕೇಸ್ ಗಳ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ಕಿಟ್ ಗಳನ್ನು ಕೂಡ ವಿತರಿಸಲಾಗಿದೆ. ನಗರದ ಉಪವಿಭಾಗದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 7 ಬೆಡ್‌ಗಳ ಪ್ರöತ್ಯೇಕ ವಿಶೇಷ ವಾರ್ಡ್ ಸಿದ್ದಪಡಿಸಲಾಗಿದೆ. ಔಷಧಿ ಸೇರಿದಂತೆ ಚಿಕಿತ್ಸೆಗೆ ಬೇಕಾಗುವ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಬಂದ ಮಹಿಳೆ ಕಳೆದ 7 ದಿನಗಳಿಂದ ಹೋಂ ಐಸೋಲೇಷನ್ ಇದ್ದಾರೆ. ಆರಾಮವಾಗಿದ್ದಾರೆ. ಮುಂಬೈ ಪ್ರವಾಸದ ಹಿನ್ನಲೆ ಹೊಂದಿರುವ ಆ ಮಹಿಳೆ ಆನಾರೋಗ್ಯದಿಂದ ಬಳ್ಳಾರಿಯ ವಿಮ್ಸ್ ನಲ್ಲಿ ಆರೋಗ್ಯ ತಪಾಸಣೆಗೆ ಒಳಗಾದಾಗ ಕೋವಿಡ್ ಪಾಸಿಟಿವ್ ಪತ್ತೆಯಾಗಿತ್ತು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿರುವ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಇದೊಂದು ರೂಪಾಂತರಿ ತಳಿ. ಆದರೆ ಕಡ್ಡಾಯವಾಗಿ ಎಚ್ಚರಿಕೆ ವಹಿಸಬೇಕು. ವೃದ್ದರು, ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಜನ ಸಂದಣಿ ಪ್ರದೇಶದಲ್ಲಿ ಮಾಸ್ಕ್ಗಳನ್ನು ಧರಿಸಬೇಕು. - ಡಾ.ಶಂಕರ್ ನಾಯ್ಕ್, ಡಿಎಚ್‌ಒ, ವಿಜಯನಗರ