ಹೊಸಪೇಟೆ : ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲಾತಿ ಮಾಡಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಮುಖ್ಯಾಧಿಕಾರಿ ಎಂ.ಪ್ರಭಾಕರ್ ಪಾಟೀಲ್ ತಿಳಿಸಿದ್ದಾರೆ.
ಸ್ವ ಸಹಾಯ ಸಂಘದ ಸದಸ್ಯರುಗಳು ಫೆ.5ರೊಳಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.