ಹೊಸಪೇಟೆ: ನಗರದ ತಹಸೀಲ್ ಕಚೇರಿಯಲ್ಲಿನ ಮಂಗಳವಾರ ವಿವಿಧ ಇಲಾಖೆಗಳಿಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ನಗರದ ತಹಸೀಲ್ ಕಚೇರಿಯಲ್ಲಿನ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ದೂರು ಬಂದ ಹಿನ್ನೆಲೆಯಲ್ಲಿ ಉಪ ನೊಂದಣಿ ಕಚೇರಿಗೆ ಭೇಟಿ ನೀಡಿ ಅಲ್ಲಿನ ವ್ಯಸ್ಥೆಯ ಬಗ್ಗೆ ಪರಿಶೀಲಿಸಿದರು. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸರಿಯಾದ ವ್ಯಸ್ಥೆಗಳನ್ನು ಮಾಡಿ. ಜನರು ಯಾವುದೇ ಸೌಲಭ್ಯಗಳಿಂದ ವಂಚಿತರಾಗಬಾರು. ಎನಿವೇರ್ ನೊಂದಣಿ ವ್ಯವಸ್ಥೆ ಜಿಲ್ಲೆಗೂ ವಿಸ್ತರಣೆಯಾಗಿದೆ. ಎನಿವೇರ್ ನೊಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೊಂದಣಿ ಕಚೇರಿಯಲ್ಲಿ ನೊಂದಾಯಿಸಿಕೊಳ್ಳ ಬಹುದಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಪ್ರತಿ ಸೋಮವಾರ, ಮಂಗಳವಾರ ಪೌತಿ, ವಾರಸು ಖಾತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಪೌತಿ ಖಾತೆ ಬದಲಾವಣೆ ಮಾಡಿಸಿ ಕೊಳ್ಳಬಹುದು. ಹಾಗಾಗಿ ಯಾರಾದರು ಗ್ರಾಮ ಆಡಳಿತ ಅಧಿಕಾರಿಗಳು ಕಚೇರಿಯಲ್ಲಿಯೇ ಇದ್ದಾರ ಅಥವಾ ಗ್ರಾಮಗಳಿಗೆ ಭೇಟೆ ನೀಡಲಿಕ್ಕೆ ಹೋಗಿದ್ದಾರ ಎಂದು ಪರಿಶೀಲಿಸಿದರು.
ಆಹಾರ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ಮಂದಗತಿಯಲ್ಲಿ ಆಗುತ್ತಿವೆ ಇದರ ಬಗ್ಗೆ ಪರಿಶೀಲನೆ ಮಾಡಿ ಇಲಾಖೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು. ಸಾರ್ವಜನಿಕರನ್ನು ಕಾಯಿಸದೇ ಆದಷ್ಟು ಬೇಗ ಕೆಲಸ ಮಾಡಿಕೋಡಿ ಎಂದರು.
ಕಚೇರಿಯ ಆವರಣದಲ್ಲಿ ಶೌಚಾಲಯ, ಕುಡಿವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಸರಿಪಡಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಸರಿಯಾದ ವ್ಯವಸ್ಥೆ ಮಾಡಿ, ಎಲ್ಲಂದರಲ್ಲಿ ಬಿದ್ದಿರುವ ಕಸದ ರಾಶಿಯನ್ನು ಸ್ವಚ್ಛಗೊಳಿಸಿ ಎಂದು ಸೂಚನೆ ನೀಡಿದರು.