ಹೊಸಪೇಟೆ : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಜಯನಗರದಲ್ಲಿ ನಡೆದ ಮಾನವ ಸರಪಳಿ ಯಶಸ್ವಿಯಾಗಿ ನಡೆಯಿತು. ಈ ಮಾನವ ಸರಪಳಿಯಲ್ಲಿ ವಿವಿಧ ಕಲತಂಡಗಳು ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು.
ಭಾನುವಾರ ವಿಜಯನಗರ ಜಿಲ್ಲಾ ವ್ಯಾಪ್ತಿಯ ಕೊಪ್ಪಳದ ಗಡಿಭಾಗದಿಂದ ತಾಲೂಕಿನ ಭುವನಹಳ್ಳಿಯ ಬಳ್ಳಾರಿ ಜಿಲ್ಲೆಯ ಗಡಿಯವರೆಗೂ ಸುಮಾರು 40 ಕೀ.ಮಿ ನಲ್ಲಿ 40 ಸಾವಿರ ಜನ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ನಗರದ ಡಾ.ಬಿ.ಅರ್.ಅಂಬೇಡ್ಕರ್ ವೃತ್ತದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಗಿಡಕ್ಕೆ ನೀರೆರೆಯುವ ಚಾಲನೆ ನೀಡಿದರು. ಬಳಿಕ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಎಂ.ಎಸ್.ದಿಚಾಕರ ಓದಲಾಯಿತು.
ನಗರದ ಮಾನವ ಸರಪಳಿಯಲ್ಲಿ ವಿವಿಧ ಶಾಲಾ, ಕಾಲೇಜಿನ ಮಕ್ಕಳು, ಸರ್ಕಾರಿ ಇಲಾಖೆ ಅಧಿಕಾರಿಗಳು, ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ದಲಿತ ಸಂಘರ್ಷ ಸಮಿತಿ ಸರಪಳಿಯಲ್ಲಿ ವಿವಿಧ ಶಾಲಾ, ಕಾಲೇಜಿನ ಮಕ್ಕಳು, ಸರ್ಕಾರಿ ಇಲಾಖೆ ಅಧಿಕಾರಿಗಳು, ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸಂಘಟನೆಗಳು ಭಾಗಿಯಾದವು. 40 ಕಿ.ಮೀ ಉದ್ದ ಮಾನವ ಸರಪಳಿಯನ್ನು ನಿರ್ಮಿಸಿ ವಿಜಯನಗರ ಜಿಲ್ಲೆಯ ಜನರು ಹೊಸ ಇತಿಹಾಸ ಬರೆದರು.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಿ ಬೆಳಸುವ ನಿಟ್ಟಿನಲ್ಲಿ ಜನರನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ಪ್ರಜಾಪ್ರಭುತ್ವ ಉಳಿಸುವುದು ಎಲ್ಲರ ಜವಾಬ್ದಾರಿ ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ಪರಸ್ಪರ ಮುಟ್ಟಿಕೊಳ್ಳುವುದೆ ಸಮಸ್ಯೆಯಾಗಿರುವ ಈ ಸಮಾಜದಲ್ಲಿ ಕೈಗೆ ಕೈಕೊಟ್ಟು ನಿಲ್ಲುವ ಮೂಲಕ ಈ ಕಾರ್ಯಕ್ರಮ ಹಮ್ಮಿಕೊಳಲಾಗಿದೆ ಎಂದರು.
ಅಸ್ಪೃಶ್ಯತೆಯನ್ನು ಮಹಾಶಾಪವೆಂದು ಬಣ್ಣಿಸಿದ್ದನ್ನು ನೆನಪಿಸಿಕೊಂಡರೆ, ಪ್ರಸ್ತುತ ರಾಜ್ಯಾದ್ಯಂತ ಸುಮಾರು ಎರಡೂವರೆ ಸಾವಿರ ಕಿ.ಮೀ. ಉದ್ದ ಮಾನವ ಸರಪಳಿಯ ನಿರ್ಮಾಣ ಮಾಡಲಾಗಿದೆ. ಸರ್ಕಾರವು ಇಂತಹ ಮಹತ್ವದ ಯೋಜನೆಯೊಂದನ್ನು ರೂಪಿಸಿದೆ. ಇದು ಜನಪರವಾದ ಆಂದೋಲನವಾಗಿ ರೂಪುಗೊಳ್ಳಬೇಕಾದಲ್ಲಿ ಆಡಳಿತ ಯಂತ್ರದ ಜವಾಬ್ದಾರಿ ದೊಡ್ಡದಾಗಿರುತ್ತದೆ. ಆಡಳಿತ ಯಂತ್ರವು ಸರ್ಕಾರದ ಆಶಯವನ್ನು ಅರ್ಥೈಸಿಕೊಂಡು ಇದರ ಪ್ರಾಮುಖ್ಯತೆಯ ಅರಿವನ್ನು ಜನ ಸಾಮಾನ್ಯರಲ್ಲಿ ಮೂಡಿಸುವ ಮೂಲಕ ಈ ಜನಾಂದೋಲನ ಉದ್ದೇಶವಾಗಿದೆ ಎಂದರು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಮಾತನಾಡಿ, ಪ್ರಜಾಪ್ರಭುತ್ವ ಮನುಕುಲ ಕಂಡುಕೊಂಡ ಮಹತ್ವದ ಆಡಳಿತ ವ್ಯವಸ್ಥೆಯಾಗಿದ್ದು, ಈ ವ್ಯವಸ್ಥೆ ಮನುಷ್ಯನ ವೈಯಕ್ತಿಕ ವಿಕಾಸದ ಜತೆಯಲ್ಲಿ ಸಾಮಾಜಿಕ, ಆರ್ಥಿಕ ವಿಕಾಸಕ್ಕೆ ಬಹುಮುಖ್ಯ ಕೊಡುಗೆಯನ್ನು ಕೊಟ್ಟಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವು ಜಗತ್ತಿನ ಅತ್ಯುತ್ತಮ ಗ್ರಂಥಗಳಲ್ಲಿ ಒಂದಾಗಿದ್ದು, ಸಮರ್ಥ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೀಡಿರುವ ಈ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಜಿಪಂ ಸಿಇಒ ಅಕ್ರಂ ಶಾ, ಎಸ್ಪಿ ಬಿ.ಎಲ್. ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ, ಹುಡಾ ಅಧ್ಯಕ್ಷ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಮುಖಂಡರಾದ ಸಿದ್ದಾರ್ಥ ಸಿಂಗ್, ಗಾಳೆಪ್ಪ, ಮರಡಿ ಜಂಬಯ್ಯ ನಾಯಕ, ಬಣ್ಣದಮನೆ ಸೋಮಶೇಖರ್, ನಿಂಬಗಲ್ ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವು ಗಣ್ಯರು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ರಾಜ್ಯದಲ್ಲಿ ಸುಮಾರು 2500 ಕಿ.ಮೀ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮವು ಮಹತ್ತರವಾದುದಾಗಿದೆ. ಈ ಕಾರ್ಯಕ್ರಮಕ್ಕೆ ದಾರಿಯುದ್ದಕ್ಕೂ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಮಾನವ ಸರಪಳಿ ಸಾಲಿನಲ್ಲಿ ನಿಂತಿರುವುದನ್ನು ಕಂಡು ಸಂತಸವಾಯಿತು. ಇದು ಸ್ಫೂರ್ತಿದಾಯಕ ಕಾರ್ಯಕ್ರಮ. ನಮ್ಮ ಸಂವಿಧಾನ, ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವ ಎಂಬ ಭಾವನೆ ಎಲ್ಲರಲ್ಲಿಯೂ ಮೂಡಬೇಕು. ಮಂಗಳಮುಖಿಯವರಿಗೂ ಸಮಾನ ಗೌರವ, ಹಕ್ಕುಗಳು ದೊರೆಯಲಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ ವೇಷ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು. ನಗರದ ಡಾ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಂದಿ ಕೋಲು, ಹಗಲು ವೇಷ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡು ಹಬ್ಬದ ವಾತಾವರಣ ಸೃಷ್ಟಿಸಿದ್ದವು. ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಭಾಗಿಯಾಗಿದ್ದರು.