ಹೊಸಪೇಟೆ: ಡೆಂಘೆಗೆ ಯಾವುದೇ ಲಸಿಕೆ ಅಥವಾ ಆಂಟಿ-ವೈರಲ್ ಚಿಕಿತ್ಸಾ ಕ್ರಮವಿಲ್ಲ. ಅದರ ತಡೆಗಟ್ಟುವಿಕೆಯೊಂದೇ ನಮಗಿರುವ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟಿçÃಯ ಡೆಂಘೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಒಂದು ರೋಗ, ಸೋಂಕು, ಕಾಯಿಲೆಯನ್ನು ತಡೆಗಟ್ಟುವಿಕೆಯ ಕೆಲಸ ಕೇವಲ ಸರ್ಕಾರಿ ಇಲಾಖೆಗಳ ಪ್ರಯತ್ನದಿಂದ ಅಸಾಧ್ಯ. ಸಾರ್ವಜನಿಕರ ಸಹಕಾರ ಹಾಗೂ ಮುಂಜಾಗೃತ ಕ್ರಮಗಳ ಪಾಲನೆಯಿಂದ ಮಾತ್ರ ಸಾಧ್ಯವಾಗಲಿದೆ. ಇದೀಗ ಮಳೆಗಾಲ ಆರಂಭವಾದ್ದರಿAದ ಸೊಳ್ಳೆಗಳ ಸಂತಾನೋತ್ಪತ್ತಿ ಸಕಾಲವಾಗಿದೆ. ಕಲುಷಿತ ನೀರು ನಿಲ್ಲದಂತೆ, ಗುಂಡಿಗಳಲ್ಲಿ ನೀರು ಸಂಗ್ರಹವಾಗದAತೆ, ನಿಗಧಿತ ಬಳಕೆಗೆ ನೀರನ್ನು ಬದಲಿಸುವಂತೆ, ಜನರು ನಿಗಾವಹಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹಾಗಾದಾಗ ಮಾತ್ರ ಡೆಂಘೆ ನಿಯಂತ್ರಣ ಸಾಧ್ಯವಾಗಲಿದೆ ಎಂದರು.
ಡಿಎಚ್‌ಒ ಶಂಕರನಾಯ್ಕ ಮಾತನಾಡಿ, ಹಿಂದಿನ ವರ್ಷದಲ್ಲಿ 314 ಡೆಂಗಿ ಜ್ವರದ ಪ್ರಕರಣಗಳು ಪತ್ತೆಯಾಗಿದ್ದವು, ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವರ್ಷ ಆರಂಭಿಕವಾಗಿ 14 ಪ್ರಕರಣಗಳು ಪತ್ತೆಯಾಗಿವೆ. ರೋಗಿಗಳು ಆಸ್ಪತ್ರೆಗೆ ದಾಖಲಾಗಿಲ್ಲ. ಡೆಂಗಿ ಜ್ವರ ಸೋಂಕಿತರು ಸುರಕ್ಷಿತವಾಗಿದ್ದಾರೆ. ಇನ್ನಷ್ಟು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡೆಂಗಿ ದಿನಾಚರಣೆಗೆ ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯಾವದೇ ಜ್ವರಗಳು ಕಂಡು ಬಂದರೆ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಮುಂದಾಗಿ ನಿರ್ಲಕ್ಷö್ಯ ಬೇಡ. ಎಲ್ಲಾ ಜ್ವರಗಳು ಡೆಂಘೆ ಆಗಿರುವುದಿಲ್ಲ. ಪತ್ತೆಯಾದರೇ ಚಿಕಿತ್ಸೆ ಪಡೆಯಲು ಸುಲಭವಾಗಲಿದೆ ಎಂದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಡೆಂಘೆ ಕುರಿತು ಜಾಗೃತಿ ಮೂಡಿಸಲಾಯಿತು. ಡೆಂಘೆ ನಿಯಂತ್ರಣ ಕ್ರಮಗಳ ಕುರಿತು ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.