ಹೊಸಪೇಟೆ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಆ.07 ರಿಂದ ಪ್ರಾರಂಭಗೊಳ್ಳುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಉತ್ಸವಗಳ ಆಚರಣೆ ಸಂದರ್ಭಗಳಲ್ಲಿ ಆಯೋಜಕರು ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕಾಗಿ ಸ್ಥಳೀಯ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರವನ್ನು ಜೆಸ್ಕಾಂ ಕಚೇರಿಗೆ ಸಲ್ಲಿಸಬೇಕು ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.
ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನುಮತಿ ಪಡೆಯದೆ ವಿದ್ಯುತ್‌ನಿಂದಾಗುವ ಅನಾಹುತಗಳಿಗೆ ಆಯೋಜಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.